Psalms 57:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
Kannada BSI Bible 2016
ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು.
Kannada Bible (KNCL) BSI 2016
ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.