Psalms 57:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು.
Kannada BSI Bible 2016
ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ.
Kannada Bible (KNCL) BSI 2016
ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.