Psalms 57:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಮನವೇ, ಎಚ್ಚರಗೊಳ್ಳು! ಹಾರ್ಪ್ ಮತ್ತು ಲೈರ್ ವಾದ್ಯಗಳೇ, ಎಚ್ಚರಗೊಳ್ಳಿರಿ. ಸಂ ಕೀರ್ತನೆಯಿಂದ ಸೂರ್ಯೋದಯವನ್ನು ಎದುರುಗೊಳ್ಳೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
Kannada BSI Bible 2016
ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಮುಂಗೊಳ್ಳುವೆನು.
Kannada Bible (KNCL) BSI 2016
ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಚ್ಚರವಾಗು, ನನ್ನ ಪ್ರಾಣವೇ, ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯಕಾಲವನ್ನು ಎಚ್ಚರಗೊಳಿಸುವೆನು.