Psalms 58:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
Kannada BSI Bible 2016
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
Kannada Bible (KNCL) BSI 2016
“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”