Psalms 58:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
Kannada BSI Bible 2016
ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
Kannada Bible (KNCL) BSI 2016
ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.