Psalms 59:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
Kannada BSI Bible 2016
ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ; ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದರಿಸಿ ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
Kannada Bible (KNCL) BSI 2016
ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.