Psalms 59:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ.
Kannada BSI Bible 2016
ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬದು ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ.
Kannada Bible (KNCL) BSI 2016
ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.