Psalms 59:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
Kannada BSI Bible 2016
ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರೋಧವಾಗಿ ಗುಂಪು ಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
Kannada Bible (KNCL) BSI 2016
ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನನ್ನ ಪ್ರಾಣಕ್ಕೆ ಅವರು ಒಳಸಂಚುಮಾಡುತ್ತಾರೆ. ಕ್ರೂರರು ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. ಯೆಹೋವ ದೇವರೇ, ನನ್ನಲ್ಲಿ ಅಪರಾಧವಿಲ್ಲ, ನಾನು ಯಾವ ತಪ್ಪೂ ಮಾಡಿಲ್ಲ.

Recommended Reading