Psalms 59:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ.
Kannada BSI Bible 2016
ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯೆತೋರಿಸಬೇಡ. ಸೆಲಾ.
Kannada Bible (KNCL) BSI 2016
ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.