Psalms 59:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.
Kannada BSI Bible 2016
ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ.
Kannada Bible (KNCL) BSI 2016
ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ.