Psalms 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
Kannada BSI Bible 2016
ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ.
Kannada Bible (KNCL) BSI 2016
ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.