Psalms 61:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
Kannada BSI Bible 2016
ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎದೆಗುಂದಿದವನಾಗಿ ಭೂವಿುಯ ಕಡೇ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
Kannada Bible (KNCL) BSI 2016
ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.