Psalms 61:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
Kannada BSI Bible 2016
ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಿನ್ನ ಸಾನ್ನಿಧ್ಯವನ್ನು ಪಡೆದು ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮಸತ್ಯತೆಗಳು ಅವನ ಬೆಂಗಾವಲಾಗಿರಲಿ.
Kannada Bible (KNCL) BSI 2016
ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.