Psalms 62:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಕ್ರಮಣ ಮಾಡುವಿರಿ? ನಾನು ಬಾಗಿದ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
Kannada BSI Bible 2016
ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು ಅವನು ಬಾಗಿದ ಗೋಡೆಯೋ ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವದು ಇನ್ನೆಷ್ಟರವರೆಗೆ?
Kannada Bible (KNCL) BSI 2016
ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?