Psalms 62:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳಾಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ.
Kannada BSI Bible 2016
ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಉನ್ನತಸ್ಥಾನದಿಂದ ದೊಬ್ಬುವದೇ ಅವರ ಆಲೋಚನೆ. ಸುಳ್ಳಾಡುವದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ.
Kannada Bible (KNCL) BSI 2016
ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.