Psalms 63:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
Kannada BSI Bible 2016
ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
Kannada Bible (KNCL) BSI 2016
ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.