Psalms 64:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
Kannada BSI Bible 2016
ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕೆಡುಕನ್ನು ಕಲ್ಪಿಸಿ ಒಳ್ಳೇ ಉಪಾಯವನ್ನು ಕಂಡುಕೊಂಡಿದ್ದೇವೆ ಅಂದುಕೊಳ್ಳುತ್ತಾರೆ; ಅವರ ಹೃದಯವೂ ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
Kannada Bible (KNCL) BSI 2016
ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.