Psalms 64:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
Kannada BSI Bible 2016
ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಎಡವಿ ಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
Kannada Bible (KNCL) BSI 2016
ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.