Psalms 65:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೊಸ ವರ್ಷವನ್ನು ಸಮೃದ್ಧಿಕರವಾದ ಸುಗ್ಗಿಯೊಂದಿಗೆ ಆರಂಭಿಸುವಾತನು ನೀನೇ. ಅನೇಕ ಬೆಳೆಗಳಿಂದ ಬಂಡಿಗಳನ್ನು ತುಂಬಿಸುವಾತನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.
Kannada BSI Bible 2016
ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದೀ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವದು.
Kannada Bible (KNCL) BSI 2016
ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ.