Psalms 65:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ಧಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
Kannada BSI Bible 2016
ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದೆದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
Kannada Bible (KNCL) BSI 2016
ಹುಲ್ಲುಗಾವಲುಗಳು ತುಂಬಿತುಳುಕುತಿವೆ ಕುರಿಹಿಂಡುಗಳಿಂದ I ಕಣಿವೆ ಕಂದರಗಳಿದೊ ಕಂಗೊಳಿಸುತ್ತಿವೆ ತೆನೆಕಾಳುಗಳಿಂದ I ಇಳೆ ಮೊಳಗುತಿದೆ ಆನಂದಘೋಷ, ಸಂತಸ ಗೀತೆಗಳಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.