Psalms 65:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಲೋಕದಾದ್ಯಂತದಲ್ಲಿರುವ ಜನರು ನಿನ್ನ ಮಹತ್ಕಾರ್ಯಗಳಿಂದ ಆಶ್ಚರ್ಯಚಕಿತರಾಗಿದ್ದಾರೆ. ಸೂರ್ಯೋದಯವೂ ಸೂರ್ಯಸ್ತಮಾನವೂ ನಮ್ಮನ್ನು ಹರ್ಷಗೊಳಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
Kannada BSI Bible 2016
ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯ ಕಟ್ಟಕಡೆಗಳಲ್ಲಿ ವಾಸಿಸುವವರೂ ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಮೂಡಣದಿಂದ ಪಡುವಣದವರೆಗೂ ಇರುವವರನ್ನು ಹರ್ಷಗೊಳಿಸುವಿ.
Kannada Bible (KNCL) BSI 2016
ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. ಉದಯಾಸ್ತಮಾನಗಳಲ್ಲಿ ಇರುವವರನ್ನು ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ.