Psalms 66:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
Kannada BSI Bible 2016
ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರು ನಮ್ಮ ತಲೆಗಳ ಮೇಲೆಯೇ ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ಪಾರುಗಾಣಿಸಿದ್ದೀ.
Kannada Bible (KNCL) BSI 2016
ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರು ನಮ್ಮ ತಲೆ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀರಿ. ನಾವು ಬೆಂಕಿಯನ್ನೂ ನೀರನ್ನೂ ದಾಟುವಂತೆ ಮಾಡಿದ್ದೀರಿ. ಆದರೆ ನೀವು ನಮ್ಮನ್ನು ಸಮೃದ್ಧಿಯ ಸ್ಥಳದೊಳಗೆ ಬರಮಾಡಿದ್ದೀರಿ.