Psalms 66:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ.
Kannada BSI Bible 2016
ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಖೋರರು ಏಳದಿರಲಿ. ಸೆಲಾ.
Kannada Bible (KNCL) BSI 2016
ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ. ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ.