Psalms 68:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಷಾನ್ ಪರ್ವತವೇ, ಚೀಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? ಯೆಹೋವನು ತನಗೆ ಪ್ರಿಯವಾದ ಚೀಯೋನ್ ಪರ್ವತವನ್ನೇ ತನ್ನ ಶಾಶ್ವತ ವಾಸಸ್ಥಾನವಾಗಿ ಆರಿಸಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
Kannada BSI Bible 2016
ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೈ ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಾರ್ಥವಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
Kannada Bible (KNCL) BSI 2016
ಆದರೂ ದೇವನಾರಿಸಿದ ಗಿರಿಯನು I ಆತ ಬಯಸಿದ ಆ ಚಿರ ನಿವಾಸವನು I ನೀ ಓರೆಗಣ್ಣಿಂದ ಕಾಣುವೆಯೇನು? I ಎಲೈ ಶಿಖರೋನ್ನತ ಪರ್ವತವೇ, ಪೇಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ? ದೇವರು ನಿವಾಸಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಯೆಹೋವ ದೇವರು ಅದರಲ್ಲಿ ಸದಾಕಾಲವೂ ವಾಸಿಸುವರು.