Psalms 68:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
Kannada BSI Bible 2016
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.
Kannada Bible (KNCL) BSI 2016
ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.