Psalms 68:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಗೆಯು ಗಾಳಿಯಿಂದ ಹೇಗೋ, ಹಾಗೆ ಅವರು ಆತನಿಂದ ಹಾರಿಹೋಗಲಿ; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ.
Kannada BSI Bible 2016
ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.
Kannada Bible (KNCL) BSI 2016
ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ.