Psalms 68:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.
Kannada BSI Bible 2016
ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ ಸ್ವೇಚ್ಫೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ಬಿಡುವನು.
Kannada Bible (KNCL) BSI 2016
ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು.