Psalms 68:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರನ್ನು ಮುನ್ನಡೆಸಿಕೊಂಡು ಹೋಗುವವರಲ್ಲಿ ಮೊದಲನೆಯದಾಗಿ ಬೆನ್ಯಾಮೀನನ ಚಿಕ್ಕ ಕುಲವಿದೆ; ಅದರ ನಂತರ ಯೆಹೂದನ ಮಹಾಕುಲವಿದೆ. ಅದರ ನಂತರ ಜೆಬುಲೂನ್ ಮತ್ತು ನಫ್ತಾಲಿ ಕುಲಗಳ ನಾಯಕರು ಇದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.
Kannada BSI Bible 2016
ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನೆಂಬ ಸಣ್ಣ ಗೋತ್ರದವರೂ ಗುಂಪಾಗಿ ಬರುವ ಯೆಹೂದಕುಲ ಪ್ರಭುಗಳೂ ಜೆಬುಲೂನ ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.
Kannada Bible (KNCL) BSI 2016
ಮುನ್ನಡೆಯುತ್ತಿಹರಿದೋ ಕಿರಿಯ ಕುಲದ ಬೆನ್ಯಮೀನರು I ಗುಂಪಾಗಿ ಬರುತಿಹರು ಯೆಹೂದ್ಯ ಕುಲದ ಗುರುಹಿರಿಯರು I ಹಿಂಬಾಲಿಸುತಿಹರು ಜೆಬುಲೋನ್, ನಫ್ತಾಲಿ ಗೋತ್ರದವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. ಯೆಹೂದದ ಪ್ರಧಾನರೂ, ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ.