Psalms 68:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.
Kannada BSI Bible 2016
ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳೀಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದರಿಸಿಬಿಡು.
Kannada Bible (KNCL) BSI 2016
ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ.