Psalms 68:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.
Kannada BSI Bible 2016
ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.
Kannada Bible (KNCL) BSI 2016
ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು.