Psalms 68:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಬಲವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ. ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.
Kannada BSI Bible 2016
ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲ್ಯರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.
Kannada Bible (KNCL) BSI 2016
ಸಾರಿರಿ ದೇವರಾ ಶಕ್ತಿಸಾಮರ್ಥ್ಯವನು I ಇಸ್ರಯೇಲಿಗೆ ತೋರಿದಾ ಪ್ರಭಾವವನು I ಗಗನವನು ಆವರಿಸಿರುವಾ ಪ್ರತಿಭೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಶಕ್ತಿಯನ್ನು ಘೋಷಿಸಿರಿ. ಇಸ್ರಾಯೇಲರ ಮೇಲೆ ಅವರ ಪ್ರಭಾವವಿರುತ್ತದೆ. ಮೇಘಗಳಲ್ಲಿ ಅವರ ಶಕ್ತಿಯು ಇರುತ್ತದೆ.