Psalms 68:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
Kannada BSI Bible 2016
ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
Kannada Bible (KNCL) BSI 2016
ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.

Recommended Reading