Psalms 69:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು. ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
Kannada BSI Bible 2016
ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊರುಬಾಗಲಲ್ಲಿ ಕೂತುಕೊಳ್ಳುವವರ ಆಡಿಕೆಗೆ ಗುರಿಯಾಗಿದ್ದೇನೆ. ಕುಡಿಕರು ನನ್ನ ವಿಷಯ ಹಾಡಿ ಗೇಲಿಮಾಡುತ್ತಾರೆ.
Kannada Bible (KNCL) BSI 2016
ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.