Psalms 69:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ; ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
Kannada BSI Bible 2016
ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯಸಂಧನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
Kannada Bible (KNCL) BSI 2016
ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ.