Psalms 69:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.
Kannada BSI Bible 2016
ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಮಡುವು ನನ್ನನ್ನು ಒಳಗೆ ಎಳಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.
Kannada Bible (KNCL) BSI 2016
ಹುಚ್ಚು ಹೊಳೆಯು ಎನ್ನ ಕೊಚ್ಚದಿರಲಯ್ಯಾ I ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ I ಪಾತಾಳವೆನ್ನನು ನುಂಗದಿರಲಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ. ಅಗಾಧವು ನನ್ನನ್ನು ನುಂಗದೆ ಇರಲಿ. ಕುಣಿಯು ನನ್ನ ಮೇಲೆ ತನ್ನ ಬಾಯನ್ನು ಮುಚ್ಚದೆ ಇರಲಿ.