Psalms 69:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಮರಳಿನೊಳಕ್ಕೆ ಮುಳುಗಿಹೋಗುತ್ತಿದ್ದೇನೆ. ನಾನು ಆಳವಾದ ನೀರಿನಲ್ಲಿದ್ದೇನೆ. ಅಲೆಗಳು ನನ್ನನ್ನು ಆವರಿಸಿಕೊಳ್ಳುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.
Kannada BSI Bible 2016
ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಳವಾದ ಕಳ್ಳುಸುಬಿನಲ್ಲಿ ಮುಳುಗುತ್ತಿದ್ದೇನೆ; ನೆಲೆ ಸಿಕ್ಕುವದಿಲ್ಲ. ದೊಡ್ಡ ಮಡುವಿನೊಳಕ್ಕೆ ಬಂದಿದ್ದೇನೆ; ಪ್ರವಾಹವು ನನ್ನನ್ನು ಬಡಕೊಂಡು ಹೋಗುತ್ತದೆ.
Kannada Bible (KNCL) BSI 2016
ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ.