Psalms 69:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
Kannada BSI Bible 2016
ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ.
Kannada Bible (KNCL) BSI 2016
ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.