Psalms 69:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
Kannada BSI Bible 2016
ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು.
Kannada Bible (KNCL) BSI 2016
ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.