Psalms 69:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
Kannada BSI Bible 2016
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಷ್ಕಾರಣದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರ್ನಿವಿುತ್ತವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡತೆಗೆದುಕೊಂಡರಲ್ಲಾ.
Kannada Bible (KNCL) BSI 2016
ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು.