Psalms 69:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.
Kannada BSI Bible 2016
ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲ್ಯರ ದೇವರೇ, ನಿನ್ನ ದರ್ಶನಾರ್ಥಿಗಳು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.
Kannada Bible (KNCL) BSI 2016
ಪ್ರಭು ಸೇನಾಧೀಶ್ವರಾ, I ನನ್ನಿಂದ ನಿರಾಶೆಯಾಗದಿರಲಿ, ನಿನ್ನ ನಂಬಿದವರಿಗೆ II ಇಸ್ರಯೇಲರ ದೇವಾ I ನನ್ನಿಂದ ನಿಂದೆಯಾಗದಿರಲಿ ನಿನ್ನ ದರ್ಶನಾರ್ಥಿಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿಮ್ನನ್ನು ಹುಡುಕುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.