Psalms 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.
Kannada BSI Bible 2016
ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಶತ್ರುವು ಕೆಡುಕನ್ನು ಹೆರಬೇಕೆಂದು ಪ್ರಸವ ವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ ಶೂನ್ಯವನ್ನೇ ಹೆತ್ತನು ನೋಡಿರಿ.
Kannada Bible (KNCL) BSI 2016
ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು.