Psalms 7:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
Kannada BSI Bible 2016
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು.
Kannada Bible (KNCL) BSI 2016
ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು.