Psalms 7:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
Kannada BSI Bible 2016
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದು ಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
Kannada Bible (KNCL) BSI 2016
ಹೇ ಪ್ರಭು, ಎಚ್ಚರಗೊಳ್ಳು: ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.