Psalms 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
Kannada BSI Bible 2016
ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
Kannada Bible (KNCL) BSI 2016
ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು: ನಿರಪರಾಧಿ, ನೀತಿವಂತ ನಾನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ.