Psalms 70:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
Kannada BSI Bible 2016
ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.
Kannada Bible (KNCL) BSI 2016
ಪಡಲಿ ಮಾನಭಂಗ ನನ್ನ ಹತ್ಯವನು ಕೋರುವವರು I ನಾಚಿ ಓಡಲಿ ಹಿಂದಕೆ ನನಗಾಪತ್ತನು ಬಯಸುವವರು I
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.