Psalms 70:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.
Kannada BSI Bible 2016
ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು - ದೇವರಿಗೆ ಸ್ತೋತ್ರವೆಂದು ಯಾವಾಗಲೂ ಅನ್ನುವವರಾಗಲಿ.
Kannada Bible (KNCL) BSI 2016
ನಿನ್ನ ದರ್ಶನಾರ್ಥಿಗಳು ಹರ್ಷಿಸಲಿ, ನಿನ್ನಲಿ ನಲಿದು ಆನಂದಿಸಲಿ I ನಿನ್ನ ಉದ್ಧಾರಕ ಶಕ್ತಿ ಪ್ರಿಯರು ಸತತ “ದೇವನಿಗೆ ಉಘೇ” ಎನ್ನಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ. ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.