Psalms 70:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
Kannada BSI Bible 2016
ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೋ ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಶೀಘ್ರವಾಗಿ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ ರಕ್ಷಕನೂ ಆಗಿದ್ದೀ; ತಡಮಾಡಬೇಡ.
Kannada Bible (KNCL) BSI 2016
ದೇವಾ, ನಾ ದಿಕ್ಕಿಲ್ಲದವನು, ಕುಗ್ಗಿದವನು, ನನ್ನ ಬಳಿಗೆ ಬಾ I ನೀನೆನಗೆ ಸಹಾಯಕನು, ರಕ್ಷಕನು ಪ್ರಭು, ತಡಮಾಡದೆ ಬಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ. ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ. ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ, ಯೆಹೋವ ದೇವರೇ, ತಡಮಾಡದೆ ಬನ್ನಿರಿ.