Psalms 71:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಸಂಪೂರ್ಣವಾಗಿ ನಾಶಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.
Kannada BSI Bible 2016
ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಾಣಕ್ಕೆ ಕಂಟಕರಾದವರು ಆಶಾಭಂಗಪಟ್ಟು ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದಾಪಮಾನಗಳು ಕವಿಯಲಿ.
Kannada Bible (KNCL) BSI 2016
ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಆರೋಪಿಸುವವರು, ನಾಚಿಕೆಪಟ್ಟು ನಾಶವಾಗಲಿ. ನನ್ನ ಕೇಡಿಗಾಗಿ ಹುಡುಕುವವರನ್ನು ನಿಂದಾಪಮಾನಗಳು ಕವಿಯಲಿ.