Psalms 71:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲಸಾಧ್ಯವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
Kannada BSI Bible 2016
ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
Kannada Bible (KNCL) BSI 2016
ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.