Psalms 71:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನೇ, ನಿನ್ನ ಘನತೆಯ ಕುರಿತು ಹೇಳುತ್ತಲೇ ಇರುವೆನು. ನಿನ್ನೊಬ್ಬನ ಒಳ್ಳೆಯತನವನ್ನು ಕುರಿತು ಮಾತಾಡುತ್ತಲೇ ಇರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
Kannada BSI Bible 2016
ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
Kannada Bible (KNCL) BSI 2016
ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ I ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರೇ ನಾನು ನಿಮ್ಮ ಮಹಾಕೃತ್ಯಗಳನ್ನು ಸಾರುವೆನು. ನಿಮ್ಮ ನೀತಿ ಕೃತ್ಯಗಳನ್ನು ಪ್ರಕಟಪಡಿಸುವೆನು.